ಚೆನ್ನೈ:- ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಹೊಸೂರು ಬಳಿ ನಡೆದಿದೆ.
Advertisement
ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಬಸ್‌ನಲ್ಲಿದ್ದ ಬಹುತೇಕ ಮಂದಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿ ವೇಗವಾಗಿ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಕರುಕಂಪಟ್ಟಿ ಬಳಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಬಿದ್ದಿದೆ.
ಪರಿಣಾಮ ಬಸ್‌ನಲ್ಲಿದ್ದ 40 ಮಂದಿ ಗಾಯಗೊಂಡಿದ್ದು, ಮೂವರು ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.