ಹಗರಿಬೊಮ್ಮನಹಳ್ಳಿ: ಹೊಸಪೇಟೆ–ಹರಿಹರ ಮುಖ್ಯ ರಸ್ತೆಯಲ್ಲಿ ಬರುವ ಪಿಂಜಾರ ಹೆಗ್ಡಾಳ್ ಗ್ರಾಮದ ಬಳಿ ಕೆಕೆಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಬಸ್ ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿ ಒಟ್ಟು 16 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ.
ಮಾಹಿತಿಯಂತೆ, ಬಸ್ಸಿನ ಪಾಟಾ (ಪ್ಲೇಟ್ ಕಟ್) ಆಗಿರುವುದರಿಂದ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಈ ಘಟನೆ ವೇಳೆ ಚಾಲಕ ಶಂಕರಲಿಂಗ ಹಾಗೂ ನಿರ್ವಾಹಕ ಹನುಮಂತಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಾರಿಗೆ ಬಸ್ ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಡಿಪೋ ಅಧಿಕಾರಿಯಾದ ಸಂತೋಷ್ ಕುಮಾರ್ ಮಾಹಿತಿ ನೀಡಿದ್ದು, ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿರುವುದಾಗಿ ತಿಳಿಸಿದ್ದಾರೆ.



