ಬಸ್ ಪಲ್ಟಿ: 8ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

0
bus palti
Spread the love

ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ : ಪಟ್ಟಣದಿಂದ ಗದಗ ಶಹರಕ್ಕೆ ತೆರಳುತ್ತಿದ್ದ ಬಸ್ ಕೊಡಗಾನೂರು ಸಮೀಪ ಪಲ್ಟಿಯಾದ ಪರಿಣಾಮ 8ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಗದಗ ಶಹರದಿಂದ ಪಟ್ಟಣಕ್ಕೆ ಆಗಮಿಸುತ್ತಿದ್ದ ಬಸ್‌ಗೆ ಜಾಗ ಬಿಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗಿದೆ.

Advertisement

ಬಸ್ ಪಲ್ಟಿಯಾದ ರಭಸಕ್ಕೆ 8ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ವಯೋವೃದ್ಧ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದರು. ಉಳಿದ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟ್ಟಣದಿಂದ ಗದಗ ಶಹರಕ್ಕೆ ಹೋಗುವ ಬಸ್‌ಗಳು ಪಲ್ಟಿ ಆಗುವ ಹಾಗೂ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ. ಇತ್ತೀಚೆಗೆ ಬಸ್ ಹಾಗೂ ಕ್ರೂಷರ್ ನಡುವೆ ಡಿಕ್ಕಿಯಾಗಿ ಸಾವು-ನೋವು ಸಂಭವಿಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here