ಬೆಂಗಳೂರು:- ನಗರದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾದಚಾರಿಗಳ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.
ರಸ್ತೆಯಲ್ಲಿ ಬರುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬಸ್ ಹರಿದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆ ಬಳಿಕ ಡ್ರೈವರ್ ಮತ್ತು ಕಂಡಕ್ಟರ್ ಬಸ್ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಕೆಎ 51 ಎಜೆ 6167 ನಂಬರಿನ ಬಸ್ ಇದಾಗಿದ್ದು, ಮೃತರ ಗುರುತು ಇನ್ನು ಪತ್ತೆ ಆಗಿಲ್ಲ.
ಕೂಡಲೇ ಸ್ಥಳಕ್ಕೆ ಜೆಬಿ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೆ ಬಿ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



