ಹಾಸನ:- ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ಜರುಗಿದೆ.
Advertisement
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ. ಮೃತ ದುರ್ದೈವಿಗಳನ್ನು ಸುರೇಶ್ (60), ಕುಮಾರ್ (55) ಎಂದು ಗುರುತಿಸಲಾಗಿದೆ. ಮೃತರು ಮಂಡ್ಯ ಜಿಲ್ಲೆ, ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮುಂಜಾನೆ ಧರ್ಮಸ್ಥಳಕ್ಕೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.