ಮೈಸೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ತಡೆಯಲು ಯತ್ನಿಸಿದ ಕನ್ನಡಪರ ಹೋರಾಟಗಾರರ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದರು.
Advertisement
ಇಂದು ಬೆಳಿಗ್ಗೆ ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಮರಾಠಿ ಸಂಘಟನೆ ಮುಖಂಡರ ವಿರುದ್ಧ ಘೋಷಣೆ ಕೂಗಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಒತ್ತಾಯಿಸಿದರು. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಎರಡು ಭಾಗಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದ ಎಲ್ಲಾ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಬಸ್ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ.


