ಗದಗ: ಸಾವಿರಾರು ಕೋಟಿ ರೂ. ಮೌಲ್ಯದ 54 ವಕಾರಸಾಲುಗಳನ್ನು ಕಾನೂನು ಬಾಹಿರವಾಗಿ ದೀರ್ಘಾವಧಿಗೆ ಒಪ್ಪಂದ ಮಾಡಿಕೊಂಡು ಸುಳ್ಳು ಠರಾವು ಸೃಷ್ಟಿಸಿದ ಆರೋಪದಡಿ ಅನರ್ಹ ಭೀತಿ ಎದುರಿಸುತ್ತಿದ್ದ ಮೂವರು BJP ನಗರಸಭೆ ಸದಸ್ಯರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ನೀಡಿದ್ದಾರೆ.
ಮಾಜಿ ಅಧ್ಯಕ್ಷೆ ಹಾಗೂ ಸದಸ್ಯೆ ಉಷಾ ದಾಸರ, ಸದಸ್ಯರಾದ ಅನಿಲ ಅಬ್ಬಿಗೇರಿ ಹಾಗೂ ಗೊಳಪ್ಪ ಮುಷಿಗೇರಿ ಅಮಾನತ್ತಿಗೆ ಒಳಪಟ್ಟ ಸದಸ್ಯರಾಗಿದ್ದು, ವಕಾರು ಸಾಲು ಲೀಸ್ ಪ್ರಕರಣ ಸಂಬಂಧಿಸಿದಂತೆ ಠರಾವು ನಕಲಿ ಕುರಿತು ಪ್ರಕರಣ ಇದಾಗಿದೆ.
ಪ್ರಾದೇಶಿಕ ಆಯುಕ್ತರಿಂದ ಆದೇಶ ಪ್ರತಿ ಜಿಲ್ಲಾಧಿಕಾರಿ ಕಚೇರಿಗೆ ರವಾನೆ ಆಗಿದ್ದು, ಸೋಮವಾರ ಅಮಾನತು ಪ್ರಕ್ರಿಯೆ ಜರುಗಬಹುದು ಎಂದು ಜಿಲ್ಲಾಡಳಿತ ಮೂಲಗಳಿಂದ ತಿಳಿದು ಬಂದಿದೆ.
ಏನಿದು ಪ್ರಕರಣ..?
2023 ರ ಅಕ್ಟೋಬರ್ 25 ರಿಂದ 2024 ರ ಜುಲೈ 22 ರ ನಡುವಿನ ಅವಧಿಯಲ್ಲಿ ಗದಗ-ಬೆಟಗೇರಿ ನಗರಸಭೆ ಮಾಲೀಕತ್ವದ ಸಾವಿರಾರು ಕೋಟಿ ರೂ. ಮೌಲ್ಯದ 54 ವಕಾರಸಾಲುಗಳನ್ನು ಕಾನೂನು ಬಾಹಿರವಾಗಿ ದೀರ್ಘಾವಧಿಗೆ ಒಪ್ಪಂದ ಮಾಡಿಕೊಂಡು ಸುಳ್ಳು ಠರಾವು ಸೃಷ್ಟಿಸಿದ ಆರೋಪದಡಿ ನಗರಸಭೆಯ ಅಂದಿನ ಪ್ರಭಾರಿ ಪೌರಾಯುಕ್ತ ಪ್ರಶಾಂತ ವರಗಪ್ಪನವರ ಅವರು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ 2024 ರ ಆ. 15 ರಂದು ದೂರು ದಾಖಲಿಸಿದ್ದರು.
2024 ರ ಫೆಬ್ರವರಿ 9ರಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸಾಗಿದೆ ಎಂದು ನಕಲಿ ಠರಾವು ಸೃಷ್ಟಿಸಿ 2024 ರ ಜುಲೈ 22ರಂದು ವಕಾರಸಾಲಿನ ಎಲ್ಲ ಅನುಭೋಗದಾರರಿಗೆ ಕಬ್ಜಾ ನೀಡಲಾಗಿದೆ ಎಂದು ನಕಲಿ ಪತ್ರವನ್ನು ಸೃಷ್ಟಿಸಿ ಎರಡೂ ದಾಖಲೆಗಳಿಗೆ ಫಿರ್ಯಾದಿದಾರರ ನಕಲಿ ಸಹಿಯನ್ನು ಮಾಡಿ ಗದಗ-ಬೆಟಗೇರಿ ನಗರಸಭೆಗೆ ಹಾಗೂ ಸರಕಾರಕ್ಕೆ ಮೋಸ ಮಾಡಿದ ಆರೋಪದಡಿ ದೂರು ದಾಖಲಾಗಿತ್ತು.
ಇತ್ತೀಚೆಗೆ ಬೆಟಗೇರಿ ಬಡಾವಣೆ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿದ್ದರು