HomeBengaluru Newsಉದ್ಯಮಿ ಮೋಹನ್ ದಾಸ್ ಪೈಗೆ ಸಂಕಷ್ಟ: ವಿಧಾನಸೌಧ ಠಾಣೆಯಲ್ಲಿ ದೂರು ದಾಖಲು!

ಉದ್ಯಮಿ ಮೋಹನ್ ದಾಸ್ ಪೈಗೆ ಸಂಕಷ್ಟ: ವಿಧಾನಸೌಧ ಠಾಣೆಯಲ್ಲಿ ದೂರು ದಾಖಲು!

For Dai;y Updates Join Our whatsapp Group

Spread the love

ಬೆಂಗಳೂರು: ಉದ್ಯಮಿ ಮೋಹನ್ ದಾಸ್ ಪೈಗೆ ಸಂಕಷ್ಟ ಎದುರಾಗಿದ್ದು, ಬೈಕ್ ಟ್ಯಾಕ್ಸಿಗೆ ಬೆಂಬಲಿಸಿ ಟ್ವೀಟ್ ಮಾಡಿದ್ದ ಹಿನ್ನೆಲೆ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ವಿಚಾರವಾಗಿ ಪರ ವಿರೋಧ ಚರ್ಚೆಗಳು ಜೋರಾಗಿದ್ದು, ಈ ಮಧ್ಯೆ ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ವಿಧಾನಸೌಧ ಠಾಣೆಗೆ ದೂರು ನೀಡಿದೆ.

ದೂರು ನೀಡಿದ ಬಳಿಕ ಮಾತನಾಡಿದ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ, ಕಳೆದ ಏಪ್ರಿಲ್‌ನಲ್ಲಿ ಹೈಕೋರ್ಟ್ ಬೈಕ್ ಟ್ಯಾಕ್ಸಿ ರದ್ದು ಮಾಡಿ ಆದೇಶ ಮಾಡಿದೆ. ಆದರೂ ಉಲ್ಲಂಘನೆ ಮಾಡಿ ಪರೋಕ್ಷವಾಗಿ ಬೈಕ್ ಟ್ಯಾಕ್ಸಿ ನಡೆಸಲಾಗುತ್ತಿದೆ. ಈ ಮಧ್ಯೆ ಮೋಹನ್ ದಾಸ್ ಪೈ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವವರು ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಇವರಿಗೆ ಕಾನೂನಿನ ಕನಿಷ್ಠ ಜ್ಞಾನ ಇಲ್ಲವೇ? ನ್ಯಾಯಾಲಯದ ಆದೇಶ ಇದ್ದರೂ ಬೈಕ್ ಟ್ಯಾಕ್ಸಿ ಪರ ಟ್ವೀಟ್ ಮಾಡಿ ಪ್ರವೋಕ್ ಮಾಡಿದ್ದಾರೆ. ಬನ್ನಿ ಚರ್ಚೆ ಮಾಡೋಣ. ಬೈಕ್ ಟ್ಯಾಕ್ಸಿಯಿಂದ ಏನೆಲ್ಲಾ ಸಮಸ್ಯೆಗಳು ಆಗುತ್ತೆ ಎಂದು ಹೇಳುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ಇನ್ನೂ ಕೆಲವು ಬೈಕ್ ಟ್ಯಾಕ್ಸಿ ಚಾಲಕರು, ಫ್ರೀಡಂ ಪಾರ್ಕ್ ಬಿಟ್ಟು ಬೇರೆಲ್ಲೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂಬುದು ಗೊತ್ತಿದ್ದರೂ, ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದು ಕಾನೂನಿನ ಉಲ್ಲಂಘನೆ. ಟ್ವೀಟ್ ಮಾಡಿದ ಮೋಹನ್ ದಾಸ್ ಪೈ ಹಾಗೂ ಪ್ರತಿಭಟನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಿದ್ದೇನೆ ಎಂದರು. ಬೈಕ್ ಟ್ಯಾಕ್ಸಿ ನಿಂತಮೇಲೆ ಆಟೋದವರು ಹೆಚ್ಚು ಹಣ ಪಡೆಯುತ್ತಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ರೀತಿ ಇದ್ದರೆ ರಿಯಾಲಿಟಿ ಚೆಕ್ ಆಗಲಿ, ಅವರ ವಿರುದ್ಧ ಕ್ರಮ ಆಗಲಿ. ದರ ನಿಗದಿ ಡ್ರೈವರ್‌ಗಳ ಕೈಯಲ್ಲಿ ಇಲ್ಲ. ಎಲ್ಲವೂ ಆಪ್ ಕಾರ್ಪೋರೇಟ್ ಕಂಪನಿಗಳ ಕೈಯಲ್ಲಿದೆ. ಸರ್ಕಾರದ ದರವನ್ನ ಆರ್‌ಟಿಒ ಜಾರಿ ಮಾಡಲಿ. ಅದರ ಉದ್ದೇಶ ನಿಜಕ್ಕೂ ಇದ್ದರೆ ಸಾರಿಗೆ ಇಲಾಖೆ ಕಾರ್ಪೋರೇಟ್ ಕಂಪನಿಗಳ ವಿರುದ್ಧ ದೂರು ನೀಡಲಿ. ಕಾನೂನು ವಿರುದ್ಧ ಹೇಳಿಕೆ ಕೊಡುವವರ ವಿರುದ್ಧ ಕ್ರಮ ಆಗಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!