ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆ ರತನ್ ಟಾಟಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ಪಗೆ ದಾಖಲಿಸಲಾಗಿದೆ. ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ರತನ್ ಟಾಟಾ ಅವರನ್ನು ಮುಂಜಾನೆ 12.30 ರಿಂದ 1.00 ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಖ್ಯಾತ ಹೃದ್ರೋಗ ತಜ್ಞ ಡಾ.ಶಾರುಖ್ ಆಸ್ಪಿ ಗೋಲ್ವಾಲಾ ನೇತೃತ್ವದ ತಜ್ಞರ ತಂಡವು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.
ಕೇವಲ ಬ್ಯುಸಿನೆಸ್‌ಮೆನ್ ಅಷ್ಟೇ ಆಗಿರದ ರತನ್ ಟಾಟಾ ಭಾರತದ ಬೆನ್ನೆಲುಬು ಅಂದ್ರೆ ತಪ್ಪಾಗಲ್ಲ. ರಕ್ತದೊತ್ತಡ ಹೆಚ್ಚಾದ ಹಿನ್ನೆಲೆ ರತನ್ ಟಾಟಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೀಘ್ರವೇ ಅವರು ಗುಣಮುಖರಾಗಲಿ ಅಂತ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ.



