ಬೈ ಎಲೆಕ್ಷನ್: ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ​ ಘೋಷಣೆ!

0
Spread the love

ನವದೆಹಲಿ:- ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ “ಕೈ” ಅಭ್ಯರ್ಥಿ ಘೋಷಿಸಲಾಗಿದ್ದು, ಮತ್ತೊಮ್ಮೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮಣೆ ಹಾಕಲಾಗಿದೆ.

Advertisement

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇನ್ನು ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಪುತ್ರಿಗೆ ಟಿಕೆಟ್​ ನೀಡಲಾಗುತ್ತೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದ್ರೆ, ಹೈಕಮಾಂಡ್​ , ಅಂತಿಮವಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್​ಗಾಗಿ ಕಾಂಗ್ರೆಸ್​​ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್​ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್​ ನೀಡಬೇಕೆಂಬ ಕೂಗು ಕೇಳಿಬಂದಿದ್ದವು.

ಅಲ್ಪಸಂಖ್ಯಾ ಸಮುದಾಯದಿಂದ ಅಜ್ಜಂಫೀರ್ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಪೈಪೋಟಿ ಇತ್ತು. ಮತ್ತೊಂದೆಡೆ ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ , ಸೋಮಣ್ಣ ಬೇವಿನಮರ ಅವರು ಟಿಕೆಟ್​ಗಾಗಿ ಕಸರತ್ತು ನಡೆಸಿದ್ದರು. ಆದ್ರೆ, ಅಂತಿಮವಾಗಿ ಹೈಕಮಾಂಡ್​ ಮತ್ತೆ ಯಾಸೀರ್ ಖಾನ್ ಪಠಾಣ್ ಅವರಿಗೆ ಮಣೆ ಹಾಕಿದೆ.


Spread the love

LEAVE A REPLY

Please enter your comment!
Please enter your name here