ಸಿಹಿ ಸುದ್ದಿ: ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಲು ಸಂಪುಟ ನಿರ್ಧಾರ!

0
Spread the love

ಬೆಂಗಳೂರು:- ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ HK ಪಾಟೀಲ್ ಹೇಳಿದ್ದಾರೆ.

Advertisement

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ನಿರ್ಧಾರ ಮಾಡಲಾಗಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶ ನೀಡಲಾಗುವುದು ಎಂದರು.

ಕರ್ನಾಟಕದಲ್ಲಿ ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್‌ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು. ಈ ಬಾರಿ 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಗೆ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾಗಿರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಾಗಿ 38 ವರ್ಷದವರೆಗೆ, ಒಬಿಸಿ ವರ್ಗದವರಿಗೆ 38 ವರ್ಷ ಬದಲಿಗೆ 41 ವರ್ಷದವರೆಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಬದಲಿಗೆ 43 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವ HK ಪಾಟೀಲ್ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here