HomeGadag Newsವೈದ್ಯರಿಗೆ ಸಂಪೂರ್ಣ ಭದ್ರತೆ ಒದಗಿಸಿ

ವೈದ್ಯರಿಗೆ ಸಂಪೂರ್ಣ ಭದ್ರತೆ ಒದಗಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕಲ್ಕತ್ತಾದ ಆರ್.ಜಿ. ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಬರ್ಬರ ಕೊಲೆಯನ್ನು ಖಂಡಿಸಿ ಮತ್ತು ನ್ಯಾಯ, ವೈದ್ಯರಿಗೆ ಸುರಕ್ಷತೆ ಮತ್ತು ಕಠಿಣ ಕಾನೂನಿಗಾಗಿ ಆಗ್ರಹಿಸಿ ಕಲ್ಕತ್ತಾದ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಕೈಗೊಂಡಿರುವ ಆಮರಣ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ಕೇಂದ್ರ-ರಾಜ್ಯ ಐಎಂಎ ಮಂಗಳವಾರ ನೀಡಿದ ರಾಷ್ಟ್ರೀಯ ಕರೆಗೆ ಗದಗ ಐಎಂಎ ಜೆಡಿಎನ್ ಹಾಗೂ ಐಎಂಎ ಎಂಎಸ್‌ಎನ್‌ನಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಕೊಲೆಯಾದ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ-ಪರಿಹಾರ ಒದಗಿಸಬೇಕು, ವೈದ್ಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ-ಕೊಲೆ ನಡೆಸುವ ದುಷ್ಠ ಶಕ್ತಿಗಳ ವಿರುದ್ಧ ಕೇಂದ್ರ ಸರಕಾರ ಕಠಿಣ ಕಾನೂನು ರಚಿಸಿ ತಕ್ಷಣದಿಂದ ಜಾರಿಗೊಳಿಸಬೇಕು, ಆಸ್ಪತ್ರೆಗಳನ್ನು ಸುರಕ್ಷಿತ ಪ್ರದೇಶವೆಂದು ಘೋಷಿಸಿ ಅಗತ್ಯ ಕ್ರಮ ಜರುಗಿಸಬೇಕು, ವೈದ್ಯರಿಗೆ ಅದರಲ್ಲೂ ವಿಶೇಷವಾಗಿ ಮಹಿಳಾ ವೈದ್ಯರಿಗೆ ಸಂಪೂರ್ಣ ಸುರಕ್ಷತೆ-ಭದ್ರತೆ ಒದಗಿಸಬೇಕು, ಪಶ್ಚಿಮ ಬಂಗಾಲ ರಾಜ್ಯದ ಆರೋಗ್ಯ ಕಾರ್ಯದರ್ಶಿ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂಬ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಯಿತು.
ಗದಗ ಐಎಂಎ ಅಧ್ಯಕ್ಷ ಡಾ.ಪವನ್ ಪಾಟೀಲ, ಕಾರ್ಯದರ್ಶಿ ತುಕಾರಾಮ ಸೂರಿ, ರಾಷ್ಟ್ರೀಯ ಐಎಂಎ ಉಪಾಧ್ಯಕ್ಷ ಡಾ. ಜಿ.ಬಿ. ಬಿಡಿನಹಾಳ, ರಾಜ್ಯ ಐಎಂಎ ನಿಕಟಪೂರ್ವ ಅಧ್ಯಕ್ಷ ಡಾ. ರಾಜಶೇಖರ ಬಳ್ಳಾರಿ, ಐಎಂಎ ಜೆಡಿಎನ್ ಅಧ್ಯಕ್ಷ ಡಾ. ಅಬ್ದುಲ್, ಡಾ. ಶರಣು ಆಲೂರ ಸೇರಿದಂತೆ ಎಲ್ಲ ವೈದ್ಯರು, ವೈದ್ಯ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿಗಳಿದ್ದರು.
ಪ್ರಕರಣ ನಡೆದು ಮೂರು ತಿಂಗಳಾದರೂ ಆರೋಪಿಗಳನ್ನು ಪತ್ತೆ ಹಚ್ಚುವದಾಗಲಿ, ಈ ಬಗ್ಗೆ ತನಿಖೆ ಸೇರಿದಂತೆ ಇತರೆ ಯಾವುದೇ ರೀತಿಯ ಕಾರ್ಯ ಮಾಡದಿರುವದನ್ನು ತೀವ್ರವಾಗಿ ಪ್ರತಿಭಟಿಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲೇ ಆಮರಣ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಅದೇ ಮಾದರಿಯಲ್ಲಿ ಗದಗ ಜಿಮ್ಸ್ನಲ್ಲಿ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಉಪವಾಸದೊಂದಿಗೆ ಸಭೆ, ಪ್ರತಿಭಟನೆ, ಮುಷ್ಕರ ನಡೆಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರಕಾರದ ಕಣ್ಣು ತೆರೆಸುವ ಕಾರ್ಯ ಮಾಡಿದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!