ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಒಳಾಂಗಣ ಕ್ರೀಡಾಕೂಟ ಜರುಗಿತು.
ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡೆಗಳು ಅವಶ್ಯಕ. ಬದುಕಿನಲ್ಲಿ ಶಿಸ್ತು, ಸಂಯಮ ಕಲಿಸುವುದರೊಂದಿಗೆ ಕ್ರಮಬದ್ಧತೆಯನ್ನು ರೂಢಿಸುತ್ತದೆ. ಆದಕಾರಣ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆಸಕ್ತಿ ಬೆಳೆಸಿಕೊಳ್ಳಿ ಎಂದರು.
ಆಡಳಿತಾಧಿಕಾರಿ ಕಿಶೋರ ಮುದಗಲ್ಲ ಮಾತನಾಡಿ, ಆಟ ಆಡುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗುವರು. ಪ್ರತಿಯೊಬ್ಬರೂ ತಮ್ಮ ಕ್ರೀಡಾ ಪ್ರತಿಭೆಗಳನ್ನು ಪ್ರದರ್ಶಿಸಿ ಉತ್ತಮ ಕ್ರೀಡಾಪಟುವಾಗಿರಿ ಎಂದರು.
ಸಂಯೋಜಕರಾದ ಪ್ರೊ. ಶಾಹಿದಾ ಶಿರಹಟ್ಟಿ ಮಾತನಾಡಿ, ಆಟೋಟಗಳಿಂದ ಮನಸ್ಸು ಉಲ್ಲಾಸಗೊಳ್ಳುತ್ತದೆ. ಕ್ರೀಡೆ ಇಲ್ಲದ ಜೀವನ ಕೀಡೆ ಹತ್ತಿದ ಹಣ್ಣಿನಂತೆ. ಆದ್ದರಿಂದ, ಎಲ್ಲರೂ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಿ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಕಾಲೇಜಿನ ಸಂಯೋಜಕರಾದ ಪ್ರೋ ಶಾಹಿದಾ ಶಿರಹಟ್ಟಿ, ಕಾಲೇಜಿನ ದೈಹಿಕ ನಿರ್ದೇಶಕ ಖಯೂಮ ನವಲೂರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.