ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಭಾರತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದರ ಸಂಪೂರ್ಣ ಕಡಿವಾಣಕ್ಕೆ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಗುರಿ ಹೊಂದಿರುವ ಕೆಆರ್‌ಎಸ್ ಪಕ್ಷದ ಪ್ರಾಮಾಣಿಕ ನಡೆಗೆ ಮತ ನೀಡಬೇಕು ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್)ಅಭ್ಯರ್ಥಿ ತನು ಯಾದವ್ ಹೇಳಿದರು.
ಅವರು ಪಟ್ಟಣದಲ್ಲಿ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡಿ ಮಾತನಾಡಿದರು. ಕರ್ನಾಟಕದ ನೆಲ-ಜಲದ ರಕ್ಷಣೆ, ಗಡಿ ಸಂರಕ್ಷಣೆ, ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಅಧ್ಯಯನ ಕೇಂದ್ರಕ್ಕೆ ಹೆಚ್ಚಿನ ಅನುದಾನ, ಹಾವೇರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ, ಬ್ಯಾಂಕಿಗ್ ಹಾಗೂ ಕೇಂದ್ರ ಸರಕಾರದ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗುವ ಅನ್ಯಾಯ ಸರಿಪಡಿಸುವುದು ಸೇರಿದಂತೆ ಅನೇಕ ಜನಪರ ಕೆಲಸ ಮಾಡಲು ಕೆಆರ್‌ಎಸ್ ಪಣ ತೊಟ್ಟಿದೆ. ಅದಕ್ಕಾಗಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ತಮ್ಮನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ನೀಲಪ್ಪ ಕಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರನಗೌಡ ಮೂಗನೂರ, ಕಾರ್ಯಕರ್ತರು ಇದ್ದರು.