ಬೆಂಗಳೂರು:- RSS ಸಂಘಕ್ಕೆ ಮುಸ್ಲೀಮರು ಸೇರಬಹುದಾ? ಎಂಬ ಪ್ರಶ್ನೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಖಡಕ್ ಉತ್ತರ ಕೊಟ್ಟಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಜಾತಿ, ಲಿಂಗ, ಮುಸ್ಲಿಂ, ಕ್ರೈಸ್ತ, ಬ್ರಾಹ್ಮಣ, ಶೈವ ಎಂಬ ಪಂಥಗಳಿಗೆ ಅವಕಾಶ ಇಲ್ಲ. ಯಾವುದೇ ಧರ್ಮದವರು ಶಾಖೆಗೆ ಬರಬಹುದು. ಆದರೆ ಶಾಖೆಗೆ ಬರುವವರು ತಮ್ಮ ಧರ್ಮವನ್ನು ಹೊರಗಿಟ್ಟು ಭಾರತ ಮಾತೆಯ ಮಕ್ಕಳಾಗಿ ಬರಬೇಕು. ಹಿಂದೂ ಸಮಾಜವನ್ನು ಒಪ್ಪಿಕೊಂಡು ಶಾಖೆಗೆ ಬರಬೇಕು. ಸಂಘದ ನಿಯಮಗಳನ್ನು ಪಾಲನೆ ಮಾಡಬೇಕು ಎಂದಿದ್ದಾರೆ.
ಆರ್‌ಎಸ್‌ಎಸ್ ನೋಂದಣಿಯಾಗಿಲ್ಲ ಎಂಬ ಆರೋಪದ ಬಗ್ಗೆಯೂ ಮಾತನಾಡಿ, RSS ಸ್ಥಾಪನೆ ಆಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟಿಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ಡಾಯ ಮಾಡಿಲ್ಲ. ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕ ಸಂಘವಾಗಿದ್ದು, ಹೀಗಾಗಿಯೇ ನೋಂದಣಿ ಮಾಡಿಸಿಲ್ಲ. ಹಿಂದೂ ಧರ್ಮ ಕೂಡಾ ನೋಂದಣಿ ಆಗಿಲ್ಲ. RSS ನಿಷೇಧ ಮಾಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಕೋರ್ಟ್ ಇದನ್ನು ತಿರಸ್ಕರಿಸಿದೆ. ನಮ್ಮದು ಸಂವಿಧಾನಾತ್ಮಕ ಸಂಘವಾಗಿದ್ದು, ಆರ್‌ಎಸ್‌ಎಸ್ ಆದಾಯ ತೆರಿಗೆ ಸಹ ಕಟ್ಟುತ್ತಿದೆ ಎಂದು ಹೇಳಿದ್ದಾರೆ.


