ಕಾಂಗ್ರೆಸ್ ಅಧ್ಯಕ್ಷರಾಗಿ RSS ಗೀತೆ ಹೇಳುವಂತಿಲ್ಲ, ಹೇಳಿದ್ರೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

0
Spread the love

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ RSS ಗೀತೆ ಹೇಳುವಂತಿಲ್ಲ, ಹೇಳಿದ್ರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಡಿಕೆಶಿ ಆರ್‌ಎಸ್‌ಎಸ್ ಗೀತೆ ಹೇಳಿದ ವಿಚಾರವಾಗಿ ನವದೆಹಲಿಯಲ್ಲಿ ಮಾತನಾಡಿದ ಅವರು,

Advertisement

ಆರ್‌ಎಸ್‌ಎಸ್‌ನ ದೇಶದಲ್ಲಿ ಈಗಾಗಲೇ ಮೂರು ಬಾರಿ ನಿಷೇಧ ಮಾಡಲಾಗಿತ್ತು. ಡಿಸಿಎಂ ಆಗಿ ಹೇಳಿದ್ರೆ ನಮ್ಮದು ಅಭ್ಯಂತರ ಇಲ್ಲ. ಸರ್ಕಾರ ಎಲ್ಲರ ಸ್ವತ್ತು. ಅದರಲ್ಲಿ ಒಳ್ಳೆಯವರು ಎಲ್ಲಾರೂ ಇರುತ್ತಾರೆ. ಆರ್‌ಎಸ್‌ಎಸ್, ತಾಲಿಬಾನ್‌ಗಳು ಇರುತ್ತಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳುವಂತಿಲ್ಲ, ಹೇಳಿದ್ರೆ ಕ್ಷಮೆ ಕೇಳಬೇಕು ಎಂದು ಮನವಿ ಮಾಡಿದ್ದಾರೆ.

ಮಹಾತ್ಮ ಗಾಂಧಿ ಕೊಂದವರು ಆರ್‌ಎಸ್‌ಎಸ್‌ನವರು. ಹೀಗಾಗಿ ಪಕ್ಷದ ನೆಲೆಗಟ್ಟಿನಲ್ಲಿ ಹಾಗೆ ಹೇಳಿದ್ರೆ ಕ್ಷಮೆ ಕೇಳಬೇಕು. ಯಾರಿಗೆ ಸಂದೇಶ ಕೊಡಲು ಆರ್‌ಎಸ್‌ಎಸ್ ಪ್ರಾರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಹಲವು ಮುಖಗಳು ಇವೆ. ಕೃಷಿಕರು, ವ್ಯಾಪಾರಸ್ಥರು, ಉದ್ಯೋಗಸ್ಥರು, ರಾಜಕರಣಿ ಅಂತಾ ಹಲವು ಮುಖಗಳಿವೆ. ಗಾಂಧಿ ಕೊಂದ ಸಂಘಟನೆ ಬಗ್ಗೆ ಹೀಗೆ ಹೇಳಿದ್ದಾರೆ. ಇದು ಯಾರಿಗಾದ್ರು ಸಂದೇಶ ಕೊಡುತ್ತಿರಬಹುದು ಎಂದರು.


Spread the love

LEAVE A REPLY

Please enter your comment!
Please enter your name here