ತುಮಕೂರು: ತುಮಕೂರಿನ ಊರುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ವಾಹನವು ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕ್ಯಾಂಟರ್ನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ಸಾವನ್ನಪ್ಪಿದ್ದಾರೆ.
Advertisement
ಮೃತರು ಹಾಸನ ಹಾಗೂ ಚಿತ್ರದುರ್ಗ ಮೂಲದವರು ಎನ್ನಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.