ಬೆಂಗಳೂರು:- ಕ್ಯಾಂಟರ್ ಚಾಲಕನ ಎಡವಟ್ಟಿನಿಂದ ನಗರದ ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ.
Advertisement
ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಐರಾವತ ಬಸ್, ಕಾರು, ಆಟೋ ಲಾರಿ ಹಾಗೂ ಬೈಕ್‍ಗೆ ಡಿಕ್ಕಿ ಹೊಡೆದಿದ್ದು, ಈ ಘಟನೆ ಇಂದು ಬೆಳಗ್ಗೆ 5:00 ಗಂಟೆಗೆ ಜರುಗಿದೆ. ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಿಂತಿದ್ದ ಕಾರು, ಆಟೋ, ಬೈಕ್‍ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಅಪ್ಪಚ್ಚಿಯಾಗಿದೆ ಅಷ್ಟೇ ಅಲ್ಲದೇ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಹೊರಬರುತ್ತಿದ್ದ ಐರಾವತ ಬಸ್‍ಗೂ ಸಹ ಕ್ಯಾಂಟರ್ ಡಿಕ್ಕಿಹೊಡೆದಿದೆ. ಬಳಿಕ ಲಾರಿಯೊಂದಕ್ಕೆ ಡಿಕ್ಕಿಯಾಗಿ ಕ್ಯಾಂಟರ್ ನಿಂತಿದೆ.
ಅಪಘಾತದಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಆಗಿಲ್ಲ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್‍ನ ಮುಂಭಾಗ ಅಪ್ಪಚ್ಚಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಕ್ಯಾಂಟರ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.