ಚಿಕ್ಕಬಳ್ಳಾಪುರ:- ಗ್ಯಾಸ್ ಸಿಲಿಂಡರ್ ಸಾಗಿಸ್ತಿದ್ದ ಕ್ಯಾಂಟರ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಸ್ಫೋಟ ಸಂಭವಿಸಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ಸಂಭವಿಸಿದೆ.
Advertisement
ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಗಾಯಾಳುಗಳು ಎಂದು ಗುರುತಿಸಲಾಗಿದೆ. ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುನೇಗಲ್ ಬಳಿ ಯೂ ಟರ್ನ್ ಪಡೆಯಲು ನಿಂತಿದ್ದ ಸಿಎನ್‍ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ದಿಮ್ಮೆಗಳನ್ನ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿಎನ್‍ಜಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಘಟನೆಯಿಂದ ಹುನೇಗಲ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.


