ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಮೃತರಲ್ಲಿ ಕೊಳ್ಳೇಗಾಲ ನ್ಯಾಯಾಲಯದ ಶಿರಸ್ತೆದಾರ ನಂಜುಂಡಪ್ಪ ಮತ್ತು ನ್ಯಾಯಾಲಯ ಸಿಬ್ಬಂದಿ ಯಮುನಪ್ಪ ಸೇರಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ, ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಕೈಗೊಂಡಿದ್ದಾರೆ.



