ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು – ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬುಕ್ಕಸಾಗರ ಬಳಿ ನಡೆದಿದೆ. ಅನಿಸ್ (21) ಮೃತ ದುರ್ಧೈವಿಯಾಗಿದ್ದು,
ಕೇರಳ ರಾಜ್ಯದ ಕಣ್ಣೂರು ನಿವಾಸಿಯಾಗಿರುವ ಮೃತ ಅನಿಸ್, ಡೂರು ಪಟ್ಟಣದಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದನು.
ದತ್ತಪೀಠದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



