HomeKarnataka Newsಕಿಡ್ನಾಪ್ ಶಂಕೆ ನಡುವೆ ಕಾರಿಗೆ ಬೆಂಕಿ: ಯುವಕ ಸಜೀವ ದಹನ, ಯುವತಿಗೆ ಚಾಕು ಇರಿತ!

ಕಿಡ್ನಾಪ್ ಶಂಕೆ ನಡುವೆ ಕಾರಿಗೆ ಬೆಂಕಿ: ಯುವಕ ಸಜೀವ ದಹನ, ಯುವತಿಗೆ ಚಾಕು ಇರಿತ!

For Dai;y Updates Join Our whatsapp Group

ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಜೋಗಿಹಳ್ಳಿ ಗ್ರಾಮದ ಸಮೀಪ ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದ ಭೀಕರ ಘಟನೆಯಲ್ಲಿ ಯುವಕನೊಬ್ಬ ಕಾರಿನಲ್ಲೇ ಸಜೀವ ದಹನಗೊಂಡಿದ್ದು, ಯುವತಿಯೋರ್ವಳು ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಯುವತಿಯನ್ನು ಬೆಂಗಳೂರಿನ ಜಯನಗರ ನಿವಾಸಿ ರಮ್ಯಾ ಎಂದು ಗುರುತಿಸಲಾಗಿದೆ. ಗಾಯಾಳು ರಮ್ಯಾಳನ್ನು ತಕ್ಷಣ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಗೇಂದ್ರ ರಮ್ಯಾಳನ್ನು ಬೆಂಗಳೂರಿನಿಂದ ಅಂಕೋಲದ ಕಡೆಗೆ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ವೇಳೆ ಜೋಗಿಹಳ್ಳಿ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿದ ವೇಳೆ ನಾಗೇಂದ್ರ ಯುವತಿಯ ತಲೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಇದರ ಬೆನ್ನಲ್ಲೇ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿದೆ. ಪರಿಣಾಮ ನಾಗೇಂದ್ರ ಕಾರಿನೊಳಗೇ ಸಿಲುಕಿ ಸಜೀವ ದಹನಗೊಂಡಿದ್ದಾನೆ. ಘಟನೆಯ ವೇಳೆ ಕಾರು ಚಾಲನೆ ಮಾಡುತ್ತಿದ್ದ ಪ್ರವೀಣ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿಗೆ ಬೆಂಕಿ ಹೇಗೆ ಹೊತ್ತಿಕೊಂಡಿತು, ಇದು ತಾಂತ್ರಿಕ ದೋಷವೇ, ಸ್ಫೋಟವೇ ಅಥವಾ ಬೇರೆ ಯಾವುದೇ ಕಾರಣವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಾರು ಬೆಂಕಿಗಾಹುತಿಯಾದ ನಿಖರ ಕಾರಣ ಹಾಗೂ ಕಿಡ್ನಾಪ್ ಶಂಕೆ ಸೇರಿದಂತೆ ಎಲ್ಲಾ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಪೊಲೀಸರ ತನಿಖೆಯ ಬಳಿಕ ಘಟನೆಯ ನಿಖರ ಹಿನ್ನೆಲೆ ಮತ್ತು ಸತ್ಯಾಂಶ ಹೊರಬೀಳುವ ನಿರೀಕ್ಷೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img