ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಣಸಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಸರಘಟ್ಟ ಮೂಲದ ಕನ್ನಯ್ಯ (62) ಮೃತ ಬೈಕ್ ಸವಾರನಾಗಿದ್ದು,
ದಾಬಸ್ ಪೇಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸರ್ವಿಸ್ ರಸ್ತೆ ಇಲ್ಲದ ಕಾರಣ ಮೆಣಸಿ ಗೇಟ್ ಬಳಿ ಅಪಘಾತಗಳು ನಿಲ್ಲುತ್ತಿಲ್ಲ, ಹತ್ತಾರು ಬಾರಿ ಸರ್ವಿಸ್ ರಸ್ತೆ ಮಾಡಲು ಮನವಿ ಕೊಟ್ಟರು ಎಸ್ ಟಿ ಆರ್ ಆರ್ ಅಧಿಕಾರಿಗಳು ಕೇರ್ ಮಾಡುತ್ತಿಲ್ಲ,
ಪ್ರತಿದಿನ ಅಪಘಾತ ನೋಡಿ ನೋಡಿ ಬೇಸತ್ತ ಜನರಿಂದ ಎಸ್ ಟಿ ಆರ್ ಆರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಸದ್ಯ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತ ಪಟ್ಟಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.