ಗದಗ:- ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಬಳ್ಳಾರಿ ಮೂಲದ ಜಿತೇಂದ್ರ ರೆಡ್ಡಿ (25) ಎಂದು ಗುರುತಿಸಲಾಗಿದೆ. ಜಿತೇಂದ್ರ ರೆಡ್ಡಿ ಬಳ್ಳಾರಿಯಿಂದ ದಾಂಡೇಲಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಅದರಲ್ಲಿ ಚಾಲಕ ಮೃತಪಟ್ಟರೆ ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಅಪಘಾತ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



