ನವದೆಹಲಿ:- ಇಲ್ಲಿನ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಘಟನೆ ಹಿನ್ನೆಲೆ ದೆಹಲಿಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ದೆಹಲಿಯ ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ಚಾಂದನಿಚೌಕ್ ಮಾರ್ಕೆಟ್, ಕೆಂಪು ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳನ್ನು ದೆಹಲಿ ಪೊಲೀಸರು ಬಂದ್ ಮಾಡಿದ್ದಾರೆ.
ಕಾರು ಸ್ಫೋಟಗೊಂಡ ಹಿನ್ನೆಲೆ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಇಂದು ಸಂಜೆ 6.55ರ ಸುಮಾರಿಗೆ ಕಾರು ಸ್ಫೋಟವಾಗಿದೆ. ಇದಾದ ನಂತರ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಯಿತು ಎಂದು ತಿಳಿದು ಬಂದಿದೆ.


