ಬೆಂಗಳೂರು:- ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳಿಗೆ ಗಾಯವಾಗಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಬಾಬುಸಾಬ್ ಪಾಳ್ಯ ನಿವಾಸಿ ಅರುಣಾ (42) ಮೃತ ಮಹಿಳೆ. ಜ. 24ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಹಿಳೆ, ಹೆಣ್ಣೂರು ಅಂಡರ್ ಪಾಸ್ ಮೂಲಕ ಮಗಳನ್ನ ತಮ್ಮ ಬೈಕ್ ನಲ್ಲಿ ಕೂರಿಸಿಕೊಂಡು ಹೋಗ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿತ್ತು. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮಹಿಳೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೋಲೀಸರು ತನಿಖೆ ಚುರುಕುಗೊಳಿಸಿ, ಕಾರು ಚಾಲಕನನ್ನು ಬಂಧಿಸಿದ್ದಾರೆ. ಬಂಧಿತ ಕಾರು ಚಾಲಕ ಕೇರಳ ಮೂಲದವ ಎನ್ನಲಾಗಿದೆ. ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



