ಬೆಂಗಳೂರು:- KSRTC ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾದ ಬಳಿ ಜರುಗಿದೆ. ಓಬಳಾರೆಡ್ಡಿ ಮೃತ ವ್ಯಕ್ತಿ.
Advertisement
ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಓಬಳಾರೆಡ್ಡಿ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಸುನಿಲ್ ಮತ್ತು ದಿವ್ಯ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.