ಹುಬ್ಬಳ್ಳಿ:- ಕಾರು-ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಗಿರಿಯಾಲ ಬೈಪಾಸ್ ಬಳಿ ಜರುಗಿದೆ.
ಕೊಪ್ಪಳದಿಂದ ಮಹಾರಾಷ್ಟ್ರದ ಕಡೆಗೆ ಹೊರಟ್ಟಿದ ಕಾರಿಗೆ ಲಾರಿ ಚಾಲಕ ಮುಂದೆಯಿಂದ ಬಂದು ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಕಾರಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಇನ್ನೂ ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.



