ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಗುದ್ದಿದ ಪರಿಣಾಮ ಓರ್ವನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ, ಹಾಗೂ ಮತ್ತಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಗದಗ ಹೊರವಲಯದ ಕಳಸಾಪೂರ ರಸ್ತೆಯ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ನಡೆದಿದೆ.
Advertisement
ಗೋವರ್ಧನ(27) ಗಂಭೀರ ಗಾಯಗೊಂಡ ಯುವಕನಾಗಿದ್ದು, ರೋಜಾ ಸುರೇಶ (22), ಹನುಮಂತು (27), ಶಿವಶಂಕರ (26)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,
ತೆಲಂಗಾಣ ರಾಜ್ಯದ ಪಾಸಿಂಗ್ ಹೊಂದಿರೋ TS07 GS6776 ನಂಬರಿನ ಕಾರು ಹೈದರಾಬಾದ್ ನಿಂದ ಗೋಕರ್ಣ ಕಡೆ ತೆರಳುತ್ತಿತ್ತು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.