ಚಿತ್ರದುರ್ಗ:- ನಡುರಸ್ತೆಯಲ್ಲೇ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರಿನ ಬೊಮ್ಮಕ್ಕನಹಳ್ಳಿ ಸಮೀಪ ಜರುಗಿದೆ.
ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಳ್ಳಕೆರೆ ಕಡೆಯಿಂದ ಮೊಳಕಾಲ್ಮೂರು ಮಾರ್ಗವಾಗಿ ಬಳ್ಳಾರಿಗೆ ಹೋಗುತ್ತಿತ್ತು. ಈ ಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾಗಿ ನುಜ್ಜುಗಜ್ಜಾಗಿದೆ.
ಕಾರಿನಲ್ಲಿದ್ದ ಐದರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮೂವರಿಗೆ ಗಂಭೀರ ಗಾಯಗಳಾಗಿವೆ. ರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.



