ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ಕಾರೊಂದು ನದಿಗೆ ಬಿದ್ದು, ಅದರೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿರುವ ಘಟನೆ ನಡೆದಿದೆ.
ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ, ತಕ್ಷಣ ನದಿಗೆ ಧುಮುಕಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಗಣೇಶ್ ಅವರ ಸಮಯಪ್ರಜ್ಞೆ ಹಾಗೂ ಸಾಹಸದಿಂದ ಇಬ್ಬರ ಜೀವ ಉಳಿದಿದ್ದು, ಅವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



