ಬೆಳ್ತಂಗಡಿ: ಕಾರು -ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ. ಅನನ್ಯಾ(21) ಮೃತ ದುರ್ಧೈವಿಯಾಗಿದ್ದು, ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು,
ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.
ಇಬ್ಬರೂ ಬೆಳ್ತಂಗಂಡಿಯಿಂದ ಕಾಲೇಜಿಗೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ವ್ಯಾಗನಾರ್ ಕಾರು ಇವರು ಪ್ರಯಾಣಿಸುತ್ತಿದ್ದ ಹೋಂಡಾ ಆಕ್ಟಿವಾಗೆ ಡಿಕ್ಕಿ ಹೊಡೆದ ಪರಿಣಾಮ ಅನನ್ಯಾ ಸಾವನ್ನಪ್ಪಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.


