ಕಾರಿನ ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡ ಚಾಲಕ, ಮೂವರು ಸಾವು

0
Spread the love

ಆಂಧ್ರಪ್ರದೇಶ:- ಆಂಧ್ರಪ್ರದೇಶದ ಜಗ್ಗಂಪೇಟ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಘಾತಕಾರಿ ಘಟನೆ ಜರುಗಿದೆ.

Advertisement

ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಅಣ್ಣಾವರಂನಿಂದ ಜಗ್ಗಂಪೇಟೆಗೆ ಹೋಗುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ವಾಹನವು ಬೈಕ್ ಮತ್ತು ಆಟೋರಿಕ್ಷಾಗೆ ಡಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ನುಗ್ಗಿ ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಮೋರ್ತಾ ಆನಂದರಾವ್, ಮೋರ್ತಾ ಕೊಂಡಯ್ಯ ಮತ್ತು ಕಾಕಡ ರಾಜು ಎಂದು ಗುರುತಿಸಲಾಗಿದೆ. ಉಳಿದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಸ್ಥಳೀಯ ಶಾಸಕ ಜ್ಯೋತುಲಾ ನೆಹರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬಗಳನ್ನು ಭೇಟಿ ಮಾಡಿ, ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದರು.

ಇದರ ನಡುವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here