ಬೆಂಗಳೂರು :- ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದಡಿ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕೇಸ್ ದಾಖಲಾಗಿದೆ.
Advertisement
ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ 353(2) ಅಡಿಯಲ್ಲಿ ಕೇಸ್ ದಾಖಲಾಗಿದೆ.
ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹೀಗಾಗಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.