ಮಂಗಳೂರು:- ಸಾಮಾಜಿಕ ಹೋರಾಟಗಾರ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕ್ರೈಸ್ತರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಕರ್ನಾಟಕ SYRO ಮಲಬಾರ್ ಕೆತೋಲಿಕ್ ಅಸೋಸಿಯೇಷನ್ ದೂರು ನೀಡಿದೆ. ಗಿಳಿಯಾರ್ ವಿರುದ್ಧ ಧರ್ಮ ಸಮುದಾಯಗಳನ್ನು ಎತ್ತಿ ಕಟ್ಟಿದ ಆರೋಪವನ್ನ ಮಾಡಲಾಗಿದೆ. ಫ್ರೀಡಂ ಪಾರ್ಕ್ನಲ್ಲಿ ನಡೆಸಿದ ಧರ್ಮ ಸಂರಕ್ಷಣಾ ಸಭೆಯಲ್ಲಿ ವಸಂತ್ ಗಿಳಿಯಾರ್ ಭಾಷಣ ಮಾಡುವ ವೇಳೆ, ಧರ್ಮಸ್ಥಳದ ಬೆಳ್ತಂಗಡಿ ಭಾಗದಲ್ಲಿ ಕ್ರೈಸ್ತ ಮಿಷನರಿಗಳ ಪ್ರಭಾವ ಹೆಚ್ಚಾಗಿದೆ. ಮಿಷನರಿಗಳ ಪ್ರಭಾವದಿಂದ ಹಿಂದೂಗಳ ತುಳಸಿ ಕಟ್ಟೆ ಒಡೆಯಲಾಗಿದೆ. ತುಳಸಿ ಕಟ್ಟೆ ಒಡೆದು ಶಿಲುಬೆ ಇಡಲಾಗಿದೆ. 1983 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರಾರಂಭವಾದ ನಂತರ ಈ ಕೃತ್ಯ ನಿಂತಿದೆ. ಆಮಿಷಗಳಿಗೆ ಬಲಿಯಾಗದಂತೆ ಗ್ರಾಮ ಅಭಿವೃದ್ಧಿ ಯೋಜನೆ ನೋಡಿಕೊಂಡಿದೆ ಎಂದಿದ್ದಾರೆ.
ಆ ಮೂಲಕ ಸಾರ್ವಜನಿಕವಾಗಿ ಗಿಳಿಯಾರ್ ಸುಳ್ಳು ಆರೋಪ ಮಾಡಿದ್ದಾರೆ. ಅವರ ಹೇಳಿಕೆ ವಿರುದ್ಧ ಯಾವುದೇ ಠಾಣೆಗಳಲ್ಲಿ ದೂರು ದಾಖಲಾಗಿಲ್ಲ. ದಂಗೆ ಏಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ಭಾಷಣ ಮಾಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ನಮಗೆ ಉತ್ತಮ ಅಭಿಪ್ರಾಯವಿದೆ. ಆದರೆ ಗಿಳಿಯಾರ್ ಕಟ್ಟುಕಥೆಯನ್ನ ಕಟ್ಟಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.