ಕಲಬುರಗಿ: ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ.
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ದೂರು ಆಧರಿಸಿ ಇಬ್ಬರು ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಿಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಕಮಿಷನರ್ ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಲಬುರಗಿ ನಗರ ಪೊಲೀಸ್ ಕಮಿಷನರ್ ಎಸ್.ಡಿ.ಶರಣಪ್ಪ, ಪರೀಕ್ಷಾ ಕೇಂದ್ರದ ಸಿಬ್ಬಂದಿಯಾದ ಶರಣಗೌಡ, ಗಣೇಶ ಬಂಧಿತರು. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ 298 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ.
ಶರಣಗೌಡ, ಗಣೇಶ ಇಬ್ಬರು ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ಸಿಬ್ಬಂದಿ ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದೇವೆ. ಪ್ರಕರಣದ ತನಿಖೆ ಮುಂದುವರಿಸಿದ್ದೇವೆ ಎಂದು ಮಾಹಿತಿ ಅವರು ನೀಡಿದ್ದಾರೆ.