ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. “ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ.
Advertisement
ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು” ತಮ್ಮ ಎಕ್ಸ್ ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ.