ಬೆಂಗಳೂರು: ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಟ ದರ್ಶನ್ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
Advertisement
ದರ್ಶನ್ ಮೂರು ದಿನದ ಒಳಗೆ ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಬರಬೇಕೆಂದು ಪೊಲೀಸರು ನೋಟಿಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೊನೆಗೂ ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಶಿವಕುಮಾರ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಏನಿದು ಪ್ರಕರಣ?
ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.