ಹಾಸನ:- ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
Accident Case: ಬೈಕ್ ಗೆ ಡಿಕ್ಕಿ ಹೊಡೆದ ಕಾರು; ಸವಾರ ಸ್ಥಳದಲ್ಲೇ ಸಾವು!
ಹಾಸನದ ಗುಡ್ಡೇನಹಳ್ಳಿ ಬಳಿ ಲೀಲಮ್ಮ ಎನ್ನುವ ಮಹಿಳೆಯನ್ನು ಬಾಣಾವರ PSI ಸುರೇಶ್ ನೇತೃತ್ವದ ತಂಡ ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.
ಏನಿದು ಘಟನೆ:
ಹಾಸನ ಜಿಲ್ಲೆಯಲ್ಲಿ ಮಹಾಲಯ ಅಮವಾಸ್ಯೆಯ ಬೆನ್ನಲ್ಲೇ ಮಹಿಳೆಯೊಬ್ಬರು ವಿಕೃತಿ ಮೆರೆದಿದ್ದಾರೆ. ಬೇಲೂರು ಪಟ್ಟಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಳಗ್ಗೆ ಭಕ್ತಾಧಿಗಳು ಕೈ ಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಕೃತ್ಯ ಖಂಡಿಸಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.