ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕಾಳಿದಾಸ, ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ನಿಲಯದ ಹಳೆಯ ವಿದ್ಯಾರ್ಥಿಗಳ ಸಂಘ ಬೆಂಗಳೂರು, ಕರ್ನಾಟಕ ಪ್ರದೇಶ ಕುರುಬರ ಸಂಘ ಗದಗ ಜಿಲ್ಲಾ ಶಾಖೆ, ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಗದಗ, ಕಾಳಿದಾಸ ಶಿಕ್ಷಣ ಸಮಿತಿ ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ `ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ’ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾಧಾರಿತ ಕೋರ್ಸ್‌ ಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಕಿಟ್ ವಿತರಣೆ, ರಾಕೇಶ ಸಿದ್ದರಾಮಯ್ಯ ಶಿಷ್ಯವೇತನ ವಿತರಣಾ ಸಮಾರಂಭವು ಜುಲೈ 6ರಂದು ಮದ್ಯಾಹ್ನ 1 ಗಂಟೆಗೆ ನಗರದ ಶ್ರೀ ಕನಕ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಸಮಾರಂಭದಲ್ಲಿ 2023-24, 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ಒಟ್ಟು 30 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ, 2023-24, 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ವಿತರಣೆ, 2023-24, 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ವಿತರಣೆ ಸೇರಿದಂತೆ ಒಟ್ಟು ಸಮಾಜದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ ಸಂಕನೂರ, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕರುಗಳಾದ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಯುವ ಧುರೀಣರಾದ ಕೃಷ್ಣಗೌಡ ಪಾಟೀಲ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಟರಾಜ ಜಿ.ಆರ್, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ರಾಜ್ಯ ಸಂಘದ ನಿರ್ದೇಶಕರುಗಳಾದ ಕಳಕನಗೌಡ ಗೌಡರ, ಚನ್ನಮ್ಮ ಹುಳಕಣ್ಣವರ, ಜಿಲ್ಲಾ, ತಾಲೂಕು ಸಂಘದ ಪದಾಧಿಕಾರಿಗಳು, ಸ್ಥಳೀಯ ಮುಖಂಡರುಗಳು ಹಾಗೂ ಸಮಾಜದ ಗಣ್ಯ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಫಕೀರಪ್ಪ ಹೆಬಸೂರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಬಿ. ಭಾವಿಕಟ್ಟಿ, ವೈ.ಡಿ. ಗುರಿಕಾರ, ಆರ್.ಎಂ. ನಿಂಬನಾಯ್ಕರ, ನಾಗಪ್ಪ ಗುಗ್ಗರಿ, ರಾಮಕೃಷ್ಣ ರೊಳ್ಳಿ, ನೀಲಕಂಠ ಮರಡಿ, ಶಿವಣ್ಣ ಸಿಂಗಟಾಲಕೇರಿ, ವೈ.ಡಿ. ಜಡದೆಲಿ, ಕೆ.ಬಿ. ಕಂಬಳಿ, ಎಸ್.ಎಸ್. ಕರಡಿ, ಬಿ.ಎಚ್. ಹ್ಯಾಟಿ, ಚನ್ನಮ್ಮ ಹುಳಕಣ್ಣವರ, ರೇಖಾ ಜಡಿ, ರವಿ ಹುಡೇದ, ಕುಮಾರ ಮಾರನಬಸರಿ, ರಾಮು ಜಡಿ ಮುಂತಾದವರು ಉಪಸ್ಥಿರಿದ್ದರು.

ಇದೇ ಸಂದರ್ಭದಲ್ಲಿ ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾಧಾರಿತ ಕೋರ್ಸ್ಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಆಯ್ದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ/ ಬ್ಯೂಟೀಷಿಯನ್ ಕಿಟ್/ ಕೌಶಲ್ಯಾಧಾರಿತ ಕಿಟ್ ವಿತರಣೆ ಮಾಡಲಾಗುವುದು ಎಂದು ಫಕೀರಪ್ಪ ಹೆಬಸೂರ ಮಾಹಿತಿ ನೀಡಿದರು.


Spread the love

LEAVE A REPLY

Please enter your comment!
Please enter your name here