ನವದೆಹಲಿ:- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಯೋಜನೆ ಮಾಡುತ್ತಿದೆ.
ಹೊಸ ನಿಯಮ ಜಾರಿಯಾದರೆ, ಟೋಲ್ ಪಾವತಿ ಸಂಪೂರ್ಣ ಡಿಜಿಟಲ್ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಜಾರಿಗೆ ಬರುತ್ತದೆ. ಫಾಸ್ಟ್‌ಟ್ಯಾಗ್ ಇಲ್ಲದ ಬಳಕೆದಾರರು ಯುಪಿಐ ಮೂಲಕ ಪಾವತಿಸಿದರೆ 1.25% ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.
ಈ ಹೊಸ ಕ್ರಮವು ದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಟೋಲ್ ವಹಿವಾಟಿನಲ್ಲಿ ಹೆಚ್ಚು ಪಾರದರ್ಶಕತೆ ಮತ್ತು ಸುಗಮತೆ ಒದಗಿಸುವುದಾಗಿ NHAI ತಿಳಿಸಿದೆ. ಸಂಪೂರ್ಣ ಡಿಜಿಟಲ್ ವ್ಯವಸ್ಥೆ ಮೂಲಕ ಹೆದ್ದಾರಿ ಬಳಕೆದಾರರಿಗೆ ಸುಗಮ, ವೇಗದ ಪ್ರಯಾಣಕ್ಕೆ ಸಹಾಯಕವಾಗಲಿದೆ.



