ಜಾತಿ ನಿಂದನೆ, ಜೀವ ಬೆದರಿಕೆ ಕೇಸ್: ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

0
Spread the love

ಬೆಂಗಳೂರು: ಜಾತಿ ನಿಂದನೆ, ಜೀವ ಬೆದರಿಕೆ ಈ ಎರಡು ಪ್ರಕರಣ ಬಿಜೆಪಿ ಶಾಸಕ ಮುನಿರತ್ನರನ್ನ ಸಂಕಷ್ಟಕ್ಕೆ ತಳ್ಳಿದೆ. ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಜಾತಿನಿಂದನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ನಾಳೆಗೆ ಶಾಸಕರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿರುವ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಸದ್ಯ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಎಂಬಲ್ಲಿ ವೈಯ್ಯಾಲಿಕಾವಲ್‌ ಪೊಲೀಸರು ಶನಿವಾರ ವಶಕ್ಕೆ ಪಡೆದು, ಬಂಧಿಸಿದ್ದರು. ಬಂಧನಕ್ಕೊಳಗಾಗಿದ್ದ ಮುನಿರತ್ನರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಭಾನುವಾರ ಆದೇಶಿಸಿತ್ತು.

 


Spread the love

LEAVE A REPLY

Please enter your comment!
Please enter your name here