ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಜಾತಿಗಣತಿ ವರದಿ ಸ್ವೀಕಾರ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲು ಕೌಂಟ್ ಡೌನ್ ಶುರುವಾಗಿದೆ. ಇನ್ನೂ ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ನೀಡಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲರೂ ಒಟ್ಟಾಗಿ ತೀರ್ಮಾನ ಮಾಡುತ್ತೇವೆ. ವರದಿ ಜಾರಿ ಬಳಿಕ ನೋಡೋಣ ಏನು ಆಗುತ್ತದೆ ಎಂದು ಹೇಳಿದ್ದಾರೆ.
ಇನ್ನೂ ಪ್ರಬಲ ಸಮುದಾಯದ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಬಲ ಸಮುದಾಯದ ವಿರೋಧದ ಬಗ್ಗೆ ವರದಿ ಓಪನ್ ಆಗಲಿ, ಆಮೇಲೆ ನೋಡೋಣ. ವರದಿ ಜಾರಿಯಾದ ಮೇಲೆ ಸದನವನ್ನೇ ಕರೆಯಬೇಕು. ಅಲ್ಲಿ ಯಾರೆಲ್ಲ ಏನೇನು ಪ್ರಶ್ನೆ ಕೇಳ್ತಾರೆ ನೋಡೋಣ ಎಂದಿದ್ದಾರೆ.