ಜಾತಿಗಣತಿ ವರದಿ: ಆತುರದ ನಿರ್ಧಾರ ಯಾರೂ ತೆಗೆದುಕೊಳ್ಳುವುದಿಲ್ಲ – ಡಿಕೆ ಶಿವಕುಮಾರ್

0
Spread the love

ದೊಡ್ಡಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಘಾಟಿ ಸುಬ್ರಮಣ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯನ್ನು ನಾನು ನೋಡಿಲ್ಲ, ಸಿಎಂ ಚರ್ಚೆ ಮಾಡೋದಾಗಿ ಹೇಳಿದ್ದಾರೆ ಅಷ್ಟೇ,

Advertisement

ನಾನು ನಿನ್ನೆ ಬೆಳಗಾವಿ, ಮಂಗಳೂರಿಗೆ ಹೋಗಿದ್ದೆ. ಇದರ ಬಗ್ಗೆ ಇನ್ನೂ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗಬೇಕು. ಸಿಎಂ ಅವರು ಇವತ್ತು ಅಸೆಂಬ್ಲಿಯಲ್ಲಿ ಚರ್ಚೆ ಮಾಡ್ತೀವಿ ಅಂತ ಹೇಳಿದ್ದಾರೆ. ಆತುರದ ನಿರ್ಧಾರ ಯಾರೂ ತೆಗೆದುಕೊಳ್ಳುವುದಿಲ್ಲ. ಕೆಲವರು ರಾಜಕಾರಣದ ಸ್ಟೇಟ್ ಮೆಂಟ್ ಮಾತನಾಡುತ್ತಾರೆ ಸತ್ಯಾಂಶಗಳನ್ನು ತಿಳಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ನಾವು ಮಾಡುತ್ತೇವೆ ಎಂದರು.


Spread the love

LEAVE A REPLY

Please enter your comment!
Please enter your name here