ಜಾತಿ ಗಣತಿ ಕಾರ್ಯಕ್ಕೆ ಚಾಲನೆ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮಂಗಳವಾರ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಗಣತಿ ಕಾರ್ಯಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು.

Advertisement

ನಂತರ ಮಾತನಾಡಿದ ಅವರು, ಸರಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ ನ್ಯಾ. ಎಚ್.ಎನ್. ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿದ್ದು, ಈ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳು ನಿಖರವಾದ ಮಾಹಿತಿಯನ್ನು ನೀಡಬೇಕೆಂದು ಹೇಳಿದರು.

ಜಾನು ಲಮಾಣಿ, ದೇವಪ್ಪ ಲಮಾಣಿ, ತಿಪ್ಪಣ್ಣ ಲಮಾಣಿ, ರುದ್ರಪ್ಪ ಲಮಾಣಿ, ರವಿ ಲಮಾಣಿ, ಉಮೇಶ ಲಮಾಣಿ, ನಿಂಗಪ್ಪ ಲಮಾಣಿ, ಶೇಖಪ್ಪ ಲಮಾಣಿ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here