HomeIndia Newsಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು...

ಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು ತಮಿಳುನಾಡು ಆಗ್ರಹ

For Dai;y Updates Join Our whatsapp Group

ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಕ್ಷಣವೇ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸಮ್ಮತಿಸಿದೆ.

ತಮಿಳುನಾಡು ಸರ್ಕಾರದ ಪರವಾಗಿ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದರು. ಮನವಿಯನ್ನು ಪರಿಗಣಿಸಿದ ನ್ಯಾಯಪೀಠವು ಗುರುವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಜುಲೈ 30ರಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಕಬಿನಿ ಹಾಗೂ ಕೃಷ್ಣರಾಜ ಸಾಗರ ಜಲಾಶಯಗಳಿಂದ ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಆದೇಶಿಸಲಾಗಿತ್ತು. ಈ ಆದೇಶವನ್ನು ಜಾರಿಗೊಳಿಸುವಂತೆ ತಮಿಳುನಾಡು ಸರ್ಕಾರ ಆಗಸ್ಟ್ 3ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಅವಧಿಯಲ್ಲಿ ಒಟ್ಟು 4.536 ಟಿಎಂಸಿ ನೀರನ್ನು ಆಗಸ್ಟ್ 12ರೊಳಗೆ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಕೋರಿದೆ.

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ತಮಿಳುನಾಡಿನ ವಿರೋಧ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂ ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಿದೆ. ಹೀಗಾಗಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದ್ದು, ಗುರುವಾರದ ವಿಚಾರಣೆ ಮಹತ್ವ ಪಡೆದುಕೊಂಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img