HomeKarnataka Newsಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ; ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು!

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ; ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು!

For Dai;y Updates Join Our whatsapp Group

ಚಾಮರಾಜನಗರ: ಕಾವೇರಿ ವನ್ಯಧಾಮದ ಹೊಳೆ ಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಅರಣ್ಯ ರಕ್ಷಕ ಶಿವರಾಜ್ ಸಾಸಲವಾಡೆ ಹಾಗೂ ವಾಚರ್‌ಗಳಾದ ಶಿವಲಿಂಗ ನಾಯ್ಕ ಮತ್ತು ಗಿರೀಶ್ ಅವರಿಗೆ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿಧಾಮದ ಹೊಳೆ ಮುರಿದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಅಂತೋಣಿಸ್ವಾಮಿ, ಡೇವಿಡ್ ಕುಮಾರ್ ಹಾಗೂ ಜಾನ್ ರೋಸ್ ಪೀಟರ್ ಮೃತಪಟ್ಟಿದ್ದರು. ಪ್ರಕರಣದಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾದ ಅರಣ್ಯ ಸಿಬ್ಬಂದಿಯನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಇದೀಗ ಪೊಲೀಸರು ದಾಖಲಿಸಿರುವ ಅಪರಾಧ ಸಂಖ್ಯೆ 166/2026ಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕೆಲ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜಾಮೀನಿನ ಷರತ್ತುಗಳೇನು?

ಅರಣ್ಯ ಸಿಬ್ಬಂದಿ ಆದೇಶದ ದಿನಾಂಕದಿಂದ 25 ದಿನಗಳೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ಬಂಧಿಸಿದಲ್ಲಿ ತಲಾ ₹1 ಲಕ್ಷದ ವೈಯಕ್ತಿಕ ಬಾಂಡ್ ಹಾಗೂ ಒಬ್ಬ ಜಾಮೀನುದಾರರನ್ನು ಪಡೆದು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು.

ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಚಾರ್ಜ್‌ಶೀಟ್ ಸಲ್ಲಿಸುವವರೆಗೆ ಪ್ರತಿ ಶನಿವಾರ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಹಾಜರಾತಿ ನೀಡಬೇಕು.

ಅಲ್ಲದೆ, ಸಾಕ್ಷಿಗಳಿಗೆ ಬೆದರಿಕೆ, ಪ್ರಚೋದನೆ ಅಥವಾ ಯಾವುದೇ ರೀತಿಯ ಪ್ರಭಾವ ಬೀರಬಾರದು ಹಾಗೂ ಸಾಕ್ಷ್ಯ ತಿರುಚಬಾರದು ಎಂದು ನ್ಯಾಯಾಲಯ ಸೂಚಿಸಿದೆ.

ಒಟ್ಟಾರೆ, ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದ್ದು, ನ್ಯಾಯಾಲಯದ ಷರತ್ತುಗಳೊಂದಿಗೆ ಅವರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img