ಬೆಂಗಳೂರು:- ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
Advertisement
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ಆತ್ಮಹತ್ಯೆಗೆ ಕಾರಣ ಏನು ಎಂಬುವುದು ತನಿಖೆ ಬಳಿಕ ತಿಳಿಯಲಿದೆ.