ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಹನಿಟ್ರ್ಯಾಪ್ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್!

0
Spread the love

ಹುಬ್ಬಳ್ಳಿ:- ಹನಿಟ್ರ್ಯಾಪ್ ಮಾಡ್ತಿದ್ದ ಗ್ಯಾಂಗ್ ಹೆಡೆಮುರಿ ಕಟ್ಟುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಈ ಗ್ಯಾಂಗ್ ಎರಡ್ಮೂರು ವಿಡಿಯೋ ತುಣುಕುಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದರು. ಹುಬ್ಬಳ್ಳಿಯ ವ್ಯಾಪಾರಿ ಚಗನ್ ಲಾಲ್ ಚೌಧರಿ ಎಂಬುವರಿಗೆ ಹನಿಟ್ರ್ಯಾಪ್ ಮಾಡಿತ್ತು. ಅವರ ವಿಡಿಯೋಗಳನ್ನು ಮಾಡಿಕೊಂಡು 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಈ ಕುರಿತು ಗಾಬರಿಯಾದ ಚಗನ್ ಲಾಲ್, ಅಶೋಕ ನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಹನಿಟ್ರ್ಯಾಪ್ ಮಾಡಿದ್ದ ನಾಲ್ವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸತ್ಯಾಂಶ ಬಾಯ್ಬಿಟ್ಟ ಖದೀಮರು, ‘ಈ ಗ್ಯಾಂಗ್ನ ಕೆಲ ಸದಸ್ಯರು ಅಂಗಡಿಗಳ ಮೇಲಿನ ನಂಬರ್ ಗಳನ್ನು ತಗೆದುಕೊಂಡು ಹೋಗಿ ಯುವತಿಗೆ ನೀಡುತ್ತಿದ್ದರು.

ನಂಬರ್ ಸಿಗುತ್ತಿದ್ದಂತೆ ಆರೋಪಿ ಯುವತಿ ಜೋಯಾ ಶಬಾನಾ ಚಾಟಿಂಗ್ ಮಾಡಿ ಬಲೆಗೆ ಹಾಕಿಕೊಳ್ಳುತ್ತಿದ್ದರು. ಇದೀಗ ಜೋಯಾ ಶಬಾನಾ, ಸೈಯದ್, ತೌಸಿಫ್, ಅಬ್ದುಲ್ ರೆಹಮಾನ್ ಸೇರಿದಂತೆ ನಾಲ್ವರು ಖದೀಮರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here