HomeGadag Newsಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ: ಡಾ. ದುರಗೇಶ್ ಕೆ.ಆರ್

ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ: ಡಾ. ದುರಗೇಶ್ ಕೆ.ಆರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸರ್ಕಾರದ ವತಿಯಿಂದ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದನ್ವಯ ಜಯಂತಿ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ವೀರ ವನಿತೆ ಒನಕೆ ಓಬವ್ವ ಕುರಿತು ಆಳವಾಗಿ ಅಧ್ಯಯನ ಮಾಡಿದವರನ್ನು ಉಪನ್ಯಾಸಕರನ್ನಾಗಿ ಆಯ್ಕೆ ಮಾಡಲು ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ನೋಡಿಕೊಳ್ಳಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಜಯಂತಿ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಒಟ್ಟಾರೆಯಾಗಿ ವೀರ ವನಿತೆ ಒನಕೆ ಓಬವ್ವ ಜಯಂತಿ ಅಚ್ಚುಕಟ್ಟಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೋಟೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮಹಬೂಬ ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿ ವಂದಿಸಿದರು.

ಸಭೆಯಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ, ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!